×
Ad

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಪ್ರಚಾರಕ್ಕೆ ಯು.ಟಿ. ಖಾದರ್ ಚಾಲನೆ

Update: 2025-12-24 18:59 IST

ಮಂಗಳೂರು, ಡಿ.24: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು 2026ರ ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ಸ್ಪೀಕರ್ ಯು.ಟಿ. ಖಾದರ್ ಬುಧವಾರ ಪ್ರಚಾರಕ್ಕೆ ಚಾಲನೆ ನೀಡಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು.ಎಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಎಂ.ಜಿ. ಸಾಹುಲ್ ಹಮೀದ್, ಸಲೀಂ ಹಂಡೇಲ್, ಕಾರ್ಯದರ್ಶಿಗಳಾದ ಎಸ್.ಎಂ.ಅಝೀಝ್ ಕೈಕಂಬ, ಅಬ್ದುಲ್ ಜಲೀಲ್ ಅರಳ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸದಸ್ಯ ಇಖ್ವಾನ್ ಅಹ್ಮದ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News