×
Ad

ಮಂಗಳೂರು | ಅಗಲಿದ ಪತ್ರಕರ್ತ ನಾಗರಾಜ್‌ಗೆ ನುಡಿನಮನ

Update: 2025-11-03 17:16 IST

ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ವೀಡಿಯೋ ಪತ್ರಕರ್ತ ನಾಗರಾಜ್‌ಗೆ ನಗರದ ಪತ್ರಿಕಾಭವನದಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮಾಜಿ ಮೇಯರ್ ಶಶಿಧರ ಹೆಗ್ಡೆ ನುಡಿನಮನ ಸಲ್ಲಿಸಿ, ಎರಡು ದಶಕದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಾಗರಾಜ್ ಅವರ ಕುಟುಂಬಕ್ಕೆ ಪರಿಹಾರ ಧನ ಒದಗಿಸಲು ರಾಜ್ಯ ಸರಕಾರವನ್ನು ಜನಪ್ರತಿನಿಧಿಗಳ ಮೂಲಕ ವಿನಂತಿಸುವುದಾಗಿ ಹೇಳಿದರು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಪದಾಧಿಕಾರಿಗಳಾದ ಶ್ರೀನಿವಾಸ ಇಂದಾಜೆ, ಜಿತೇಂದ್ರ ಕುಂದೇಶ್ವರ, ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ವಿಜಯ ಕೋಟ್ಯಾನ್ ಪಡು ಮಾತನಾಡಿದರು. ದಿ. ನಾಗರಾಜ್ ಕುಟುಂಬದ ಸದಸ್ಯರು ಮತ್ತು ಪತ್ರಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News