×
Ad

ಮಂಗಳೂರು ವಿವಿಯ ಜು.18ರ ಪದವಿ ಪರೀಕ್ಷೆಗಳು ಮುಂದೂಡಿಕೆ ಇಲ್ಲ: ಪರೀಕ್ಷಾಂಗ ಕುಲಸಚಿವರ ಸ್ಪಷ್ಟನೆ

Update: 2023-07-17 22:39 IST

ಮಂಗಳೂರು, ಜು. 17: ಮಂಗಳೂರು ವಿಶ್ವವಿದ್ಯಾನಿಲಯದ ಜು.18ರ ಎಲ್ಲ ಪದವಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿದೆ. ಪರೀಕ್ಷೆ ಮುಂದೂಡಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಸ್ಪಷ್ಟಪಡಿಸಿದ್ದಾರೆ.

ಜು.18ರಂದು ನಿಗದಿಪಡಿಸಿರುವ ಎಲ್ಲ ಪದವಿ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿದ್ದು, ಯಾವುದೇ ಬದಲಾವಣೆ ಅಥವಾ ಮುಂದೂಡಿಕೆ ಇರುವುದಿಲ್ಲ. ಪರೀಕ್ಷೆಯ ಬಗ್ಗೆ ಸಾಮಾಜಿಕ ಜಾಲತಾಣದ ಹರಿದಾಡುತ್ತಿರುವ ಸುಳ್ಳು ಸುದ್ದಿ ಕಡೆಗಣಿಸಿ ವಿವಿಯ ಅಧಿಕೃತ ಜಾಲತಾಣ, ಪ್ರಾಂಶುಪಾಲರ ಮುಖಾಂತರ ಮಾತ್ರ ವಿದ್ಯಾರ್ಥಿಗಳು ಮಾಹಿತಿ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ಪರೀಕ್ಷೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News