×
Ad

ಮಂಗಳೂರು: ಯುನಿಸೆಕ್ಸ್ ಸೆಲೂನ್‌ಗಳ ಪರಿಶೀಲನೆ

Update: 2023-09-22 21:28 IST

ಸಾಂದರ್ಭಿಕ ಚಿತ್ರ

ಮಂಗಳೂರು: ನಗರದ ಕೆಲವು ಯುನಿಸೆಕ್ಸ್ ಸೆಲೂನುಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಕ್ರಮಗಳ ಬಗ್ಗೆ ಮಾಹಿತಿ ಪಡೆದ ಪೊಲೀಸರು ನಗರದ 14 ಸೆಲೂನ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಯಾವುದೇ ಸಮಯದಲ್ಲೂ ಯುನಿಸೆಕ್ಸ್ ಸೆಲೂನುಗಳು ಪರಿಶೀಲನೆಗೆ ಮುಕ್ತವಾಗಿರಬೇಕು. ಸೆಲೂನಿನ ಪ್ರವೇಶ ದ್ವಾರ ಸಹಿತ ಪ್ರಮುಖ ಸ್ಥಳಗಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಎಲ್ಲಾ ಗ್ರಾಹಕರ ದಾಖಲೆಯನ್ನು ಇರಿಸಿಕೊಳ್ಳಬೇಕು. ಮಾಲಕರು ಸೆಲೂನ್ ಕೆಲಸಗಾರರ ಬಗ್ಗೆ ಪೊಲೀಸ್ ದೃಢೀಕರಣ ಪಡೆಯಬೇಕು. ಈ ನಿಯಮ ಮೀರಿದರೆ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News