×
Ad

ಮಂಗಳೂರು | ರಜಾದಿನಗಳಲ್ಲಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಣೆ

Update: 2025-05-29 23:12 IST

ಮಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ಉಪನೋಂದಣಾಧಿಕಾರಿಗಳ ಕಚೇರಿಯು 2ನೇ ಮತ್ತು 4ನೇ ಶನಿವಾರ ಮತ್ತು ಎಲ್ಲಾ ರವಿವಾರ ಕಾರ್ಯ ನಿರ್ವಹಿಸಲು ಆದೇಶ ಹೊರಡಿಸಲಾಗಿರುತ್ತದೆ. ರಜಾದಿನಗಳಂದು ಕಚೇರಿ ತೆರೆದಿರುವ ಬಗ್ಗೆ ಉಪನೋಂದಣಿ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.

ಸಾರ್ವಜನಿಕರು ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News