ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಗೆ
Update: 2025-07-23 20:36 IST
ಮಂಗಳೂರು : ಉದ್ಯಮಿಗಳಿಗೆ ನೂರಾರು ಕೋ.ರೂ.ಗಳನ್ನು ವಂಚಿಸಿದ ಪ್ರಕರಣದ ಆರೋಪಿ ನಗರದ ಬಜಾಲ್ ಬೊಲ್ಲಗುಡ್ಡೆ ನಿವಾಸಿ ರೋಶನ್ ಸಲ್ದಾನ್ಹಾ (43)ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ರೋಶನ್ ಸಲ್ದಾನ್ಹಾನನ್ನು ಕಳೆದ ಗುರುವಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ದ್ದರು. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಬುಧವಾರ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಿದೆ.
ಆರೋಪಿ ಬಿಹಾರದ ಉದ್ಯಮಿಗೆ 10 ಕೋ.ರೂ. ವಂಚಿಸಿರುವ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿಐಡಿ ತಂಡವು ಇನ್ನಷ್ಟೇ ಮಂಗಳೂರಿಗೆ ಆಗಮಿಸಬೇಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.