×
Ad

ಮಂಗಳೂರು | ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಪುನರಾಯ್ಕೆ

Update: 2025-11-27 17:35 IST

ಐಕಳ ಹರೀಶ್ ಶೆಟ್ಟಿ

ಮಂಗಳೂರು, ನ.27: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾಧಿಕಾರಿ ಪೃಥ್ವಿರಾಜ್ ರೈ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿಯಾಗಿ ಉಳ್ಳೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ.ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈ ಆಯ್ಕೆಗೊಂಡರು.

ಐಕಳ ಹರೀಶ್ ಶೆಟ್ಟಿ ಅವರನ್ನು ಗುರುದೇವಾನಂದ ಸ್ವಾಮೀಜಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಸನ್ಮಾನಿಸಿದರು.

ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್, ದುಬೈ ಯುಎಇ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ, ಬಂಟರ ಸಂಘ ಮುಂಬೈ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪೃಥ್ವಿರಾಜ್ ರೈ, ಎ.ಸಿ. ಭಂಡಾರಿ, ಸುಧಾಕರ್ ಎಸ್. ಪೂಂಜ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ.ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News