×
Ad

ಮಂಗಳೂರು: ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿಗೆ ಮನವಿ

Update: 2023-08-02 20:26 IST

ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಪತ್ರಕರ್ತರ ಸಂಘ ಹಮ್ಮಿ ಕೊಂಡಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಅಶೋಕ್ ಕುಮಾರ್ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾದ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿ ಕಾರಿ ಪುಷ್ಪರಾಜ್ ಬಿಎನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಮುಹಮ್ಮದ್ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News