×
Ad

ಮಂಗಳೂರು | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Update: 2025-12-10 19:05 IST

ಮಂಗಳೂರು,ಡಿ.10: ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ದ.ಕ. ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಪ್ರಾಯ ಮೀರಿರಬಾರದು. ತರಬೇತಿಯ ಅವಧಿಯ ವೇಳೆ ಮಾಸಿಕ 15,000 ರೂ. ಶಿಷ್ಯವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ನೆಹರೂ ಮೈದಾನದ ಎದುರು ಇರುವ ಪಿಡಬ್ಲ್ಯುಡಿ ಕಟ್ಟಡದ 2ನೇ ಮಹಡಿಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ದೂ,ಸ: 9886068357)ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News