ಮಂಗಳೂರು | ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಡಿ.4: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Educationನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ DBT ಮೂಲಕ ಜಮಾ ಮಾಡಲಾಗುವುದು. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ಡಿ.31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.