×
Ad

ಮಂಗಳೂರು | ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Update: 2025-11-18 17:50 IST

ಮಂಗಳೂರು,ನ.18: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15.

ಹೆಚ್ಚಿನ ಮಾಹಿತಿಗೆ ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಹಾಗೂ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಂಗಳೂರು ನಗರ (ದೂ.ಸಂ 0824-2959809, ಪುತ್ತೂರು-08251-230388, ಮಂಗಳೂರು ಗ್ರಾಮಾಂತರ-0824-2263199, ಬಂಟ್ವಾಳ 08255-232465, ವಿಟ್ಲ 08255-238080, ಬೆಳ್ತಂಗಡಿ-08256-295134, ಸುಳ್ಯ-08257-230239 ಸಂಪರ್ಕಿಸಬಹುದು ಎಂದು ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News