×
Ad

Mangaluru | ಬಜಪೆ ಪಟ್ಟಣ ಪಂಚಾಯತ್ ನಿಂದ ಡಿ.9ರಂದು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಸಭೆ

Update: 2025-12-06 18:57 IST

ಸಾಂದರ್ಭಿಕ ಚಿತ್ರ

ಮಂಗಳೂರು,ಡಿ.6: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸರಬರಾಜು ಮಾಡುವುದಕ್ಕಾಗಿ ಸ್ಥಳ ಗುರುತಿಸಲು ಮತ್ತು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಚರ್ಚಿಸಲು ಡಿ.9ರಂದು ಅಪರಾಹ್ನ 3:30ಕ್ಕೆ ಬಜಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.

ಆಸಕ್ತ ಸಾರ್ವಜನಿಕರು ಮತ್ತು ಶ್ವಾನ/ಪ್ರಾಣಿಪ್ರಿಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಲು ಬಜಪೆ ಪಪಂ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News