ಮಂಗಳೂರು | ಯಕ್ಷಮಿತ್ರರು ಟ್ರಸ್ಟ್ ನಿಂದ ದಿನದರ್ಶಿಕೆ ಬಿಡುಗಡೆ
Update: 2025-12-15 20:18 IST
ಮಂಗಳೂರು, ಡಿ.15: ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ವತಿಯಿಂದ 2026 ಹೊಸ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭ ಬೆಂಗಳೂರಿನ ನಾಗಸಂದ್ರ ಕರಿಓಬನಹಳ್ಳಿ ‘ಶಬರಿಗಿರಿ’ಯಲ್ಲಿ ಶನಿವಾರ ನಡೆಯಿತು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ದಿನದರ್ಶಿಕೆ ಬಿಡುಗಡೆಗೊಳಿಸಿದರು. ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ಕಾರ್ಯದರ್ಶಿ ಶ್ಯಾಮ ಸೂರ್ಯ ಮುಳಿಗದ್ದೆ ಮಾತನಾಡಿದರು, ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ ಗೌರವಾಧ್ಯಕ್ಷ ಆರ್.ಕೆ. ಭಟ್ ಬೆಳ್ಳಾರೆ ಅತಿಥಿಯಾಗಿದ್ದರು.
ಟ್ರಸ್ಟ್ ಉಪಾಧ್ಯಕ್ಷ ಕಿರಣ್ಕುಮಾರ್ ಉಪಸ್ಥಿತರಿದ್ದರು. ಈ ಸಂದರ್ಭ ಡಾ.ಟಿ. ಶಾಮ ಭಟ್ ಹಾಗೂ ಕಲಾಪೋಷಕ ಆರ್.ಕೆ. ಭಟ್ ಬೆಳ್ಳಾರೆ ಅವರನ್ನು ಗೌರವಿಸಲಾಯಿತು. ವಿದುಷಿ ಪ್ರಣತಿ ಚೈತನ್ಯ ಪದ್ಯಾಣ ಮತ್ತು ಬಳಗದಿಂದ ಭರತನಾಟ್ಯ ಹಾಗೂ ಭವ್ಯಶ್ರೀ ಕುಲ್ಕುಂದ ಮತ್ತು ಸಂಪೂರ್ಣ ಮಹಿಳಾ ಕಲಾವಿದರನ್ನು ಒಳಗೊಂಡ ತಂಡದಿಂದ ಯಕ್ಷ ಗಾನ ವೈಭವ ನೆರವೇರಿತು.