ಮಂಗಳೂರು| ಜಾತಿ ನಿಂದನೆ ಪ್ರಕರಣ : ಆರೋಪಿಗೆ ಜೈಲುಶಿಕ್ಷೆ, ದಂಡ
Update: 2026-02-27 18:28 IST
ಮಂಗಳೂರು, ಫೆ.27: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಖಾಲಿದ್ ಅಬ್ದುಲ್ ಖಾದರ್ ಎಂಬಾತನಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1 ವರ್ಷ ಕಾರಾಗೃಹ ಹಾಗೂ 10,000 ರೂ ದಂಡ ವಿಧಿಸಿದೆ.
ಅಂದಿನ ತನಿಖಾಧಿಕಾರಿಯಾಗಿದ್ದ ಬಂಟ್ವಾಳ ಉಪವಿಭಾಗದ ಉಪಾಧೀಕ್ಷಕ ವ್ಯಾಲೆಂಟೈನ್ ಡಿಸೋಜ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಗುರುವಾರ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ದೂರುದಾರರ ಪರ ವಾದಿಸಿದ್ದರು.