×
Ad

ಮಂಗಳೂರು: ಸಿಪಿಐಎಂ ವತಿಯಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ

Update: 2023-12-19 15:25 IST

ಮಂಗಳೂರು, ಡಿ.19: ದ.ಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐಎಂ ದಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ  ನಡೆದ ಬೃಹತ್ ಮೆರವಣಿಗೆಯ ಬಳಿಕ ಬಹಿರಂಗ‌ ಸಭೆ ಜರಗಿತು.

ಸಿಪಿಐಎಂನ ಜೆ.ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ರಾಜ್ಯ ಸಮಿತಿ ಸದಸ್ಯ, ಡಿವೈಎಫ್ ಐ ನ ಮುನೀರ್ ಕಾಟಿಪಳ್ಳ, ವಸಂತ ಆಚಾರಿ, ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟ್ಟು, ಪದ್ಮಾವತಿ ಶೆಟ್ಟಿ, ಸದಾಶಿವ, ಜಯಂತಿ ಶೆಟ್ಟಿ, ರಮಣಿ ಮೂಡುಬಿದಿರೆ, ವಸಂತಿ, ಯೋಗೀಶ್ ಜೆಪ್ಪಿನ ಮೊಗರು, ಕೃಷ್ಣಪ್ಪ ಸಾಲ್ಯಾನ್ ಮೊದಲಾದವರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News