×
Ad

ಅಂಬೇಡ್ಕರ್‌ಗೆ ದ.ಕ. ಜಿಲ್ಲಾಡಳಿತದಿಂದ ಗೌರವ

Update: 2025-12-06 18:31 IST

ಮಂಗಳೂರು,ಡಿ.6: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ದ.ಕ. ಜಿಲ್ಲಾಡಳಿತದ ವತಿಯಿಂದ ಶನಿವಾರ ಗೌರವ ಸಲ್ಲಿಸಲಾಯಿತು.

ನಗರದ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಪಂ ಸಿಇಒ ನರ್ವಾಡೆ ನಾಯಕ ಕಾರ್ಬಾರಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ದೇಶವು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣವಾಗಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಜೀವಿಸಲು ಅಗತ್ಯವಾದ ಸ್ವಾತಂತ್ರ್ಯ ಮತ್ತು ಹಕ್ಕು ಒದಗಿಸಲು ಅವರು ಕಾರಣಕರ್ತರಾಗಿದ್ದಾರೆ. ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿದರೆ ಉತ್ತಮ ನಾಗರಿಕರಾಗಬಹುದು ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ಬಿ.ಎಸ್. ಹೇಮಲತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News