ಮಂಗಳೂರು | ವಿಚಾರಾಧೀನ ಕೈದಿ ಮೃತ್ಯು: ಪ್ರಕರಣ ದಾಖಲು
Update: 2025-12-11 22:28 IST
ಮಂಗಳೂರು, ಡಿ.11: ಚಿಕಿತ್ಸೆಗೆಗಾಗಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿದ್ದ ಈತನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಠಾಣೆಯ ಪೊಲೀಸರು ತಿಳಿಸಿದ್ದಾರೆ.