×
Ad

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ; ಬಿಹಾರದ ಇಬ್ಬರ ಬಂಧನ

Update: 2025-09-01 23:24 IST

ಮಂಗಳೂರು, ಸೆ.1: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ರೈಲ್ವೇ ಸ್ಟೇಶನ್ ಬಳಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಆರೋಪದಲ್ಲಿ ಬಿಹಾರದ ಇಬ್ಬರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಬಿಹಾರ ರಾಜ್ಯದ ಅರ್ನೌಟ್ ಗ್ರಾಮದ ಹರ್ಷ ಕುಮಾರ್ (22 ) ಮತ್ತು ಶಾಪುರ್ ಗ್ರಾಮದ ಅಮರ್ ಕುಮಾರ (28) ಬಂಧಿತ ಆರೋಪಿಗಳು.

ಹರ್ಷ ಕುಮಾರ್ ಎಂಬಾತನಿಂದ 1 ಕೆ ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದ್ದು, , ಇದರ ಮೌಲ್ಯ ಸುಮಾರು 75,000 ರೂಪಾಯಿಗಳಷ್ಟು ಆಗಿರುತ್ತದೆ. ಆರೋಪಿಗಳು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ 2 ಮೊಬೈಲ್ ಪೋನ್‌ಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಾಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ ಮತ್ತು ಇನ್ನೊಬ್ಬಾತ ದಿಲ್ಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿರುವುದಾಗಿದೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕ ಶ್ರೀಕಾಂತ್ ಕೆ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕ ಮುಹಮ್ಮದ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಪಿಎಸ್‌ಐ ಜ್ಞಾನಶೇಖರ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News