×
Ad

ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ, ಸಾಗಾಟ ಪ್ರಕರಣ; ಐವರ ಬಂಧನ

Update: 2025-09-12 14:34 IST

ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ.

05 ಆರೋಪಿಗಳನ್ನು ದಸ್ತಗಿರಿ ಮಾಡಿ 4 ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 2 ಕೆಜಿ 398 ಗ್ರಾಂ ಗಾಂಜ ಮತ್ತು 14 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾದಕ ವಸ್ತು ಸೇವನೆ ಮಾಡಿರುವ 5 ಪ್ರಕರಣವನ್ನೂ ದಾಖಲಿಸಿದ್ದು,  ವಶಕ್ಕೆ ಪಡೆದ ಆರೋಪಿಗಳ ಮೂಲಕ ಪೆಡ್ಲರ್‌ಗಳ ಮಾಹಿತಿಯನ್ನು ಕಲೆ ಹಾಕಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಮಾದಕ ವಸ್ತು ಮಾರಾಟ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಿಸಿದ್ದು, ಭರತ್ ಕುಮಾರ್ ಮತ್ತು ಮೊಹಮ್ಮದ್ ಫಾರೂಕ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ವಿಜಯ್ ಮತ್ತು ಶಿವಪ್ರಸಾದ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ದೀಪೇಶ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ.

ಅಲ್ಲದೇ ಮಾದಕ ವಸ್ತು ಸೇವನೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಬಜಪೆ, ಕಂಕನಾಡಿ ನಗರ, ಕಾವೂರು ಪೊಲೀಸ್ ಠಾಣೆಗಳಲ್ಲಿ ತಲಾ 1 ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿನ ಆರೋಪಿಗಳಿಗೆ ಮಾದಕ ವಸ್ತು ನೀಡಿರುವವರ ಮಾಹಿತಿಯನ್ನು ಕಲೆಹಾಕಿ ಮಾದಕ ವಸ್ತು ಸರಬರಾಜು ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News