×
Ad

ಮಂಗಳೂರು: ರಿಲಯನ್ಸ್ ಇನ್ಶೂರೆನ್ಸ್ ಕಚೇರಿಯಲ್ಲಿ ಬೆಂಕಿ ಅವಘಡ

Update: 2023-07-26 22:48 IST

ಸಾಂದರ್ಭಿಕ ಚಿತ್ರ

ಮಂಗಳೂರು, ಜು.26: ನಗರದ ಬಾವುಟಗುಡ್ಡೆಯ ರಿಲಯನ್ಸ್ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಿಂದ ಕಂಪ್ಯೂಟರ್, ಎಸಿ ಮತ್ತಿತರ ವಸ್ತುಗಳು ಸುಟ್ಟು ಹೋಗಿವೆ. ಬಾವುಟಗುಡ್ಡೆಯ ಕೆಎಂಸಿ ದಂತ ವೈದ್ಯಕೀಯ ಕಾಲೇಜು ಎದುರುಗಡೆಯಿರುವ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನ 3ನೇ ಅಂತಸ್ತಿನಲ್ಲಿರುವ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ತಕ್ಷಣ ಪಾಂಡೇಶ್ವರ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದಾರೆ. ಇನ್ನು ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News