×
Ad

ಮಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ: ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ

Update: 2025-06-02 11:07 IST

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮುಂಜಾನೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಯಿಂದ ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

 ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಯಲ್ಲಿ ವಾಸವಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಹೀಟರ್ ಬಳಕೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಮನೆ ಹಾಗೂ ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಆಕ್ಸಿಜನ್ ಮಾಸ್ಕ್ ಸಿಲಿಂಡರ್ ಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಫ್ಯಾನ್ ಗಳನ್ನು ಬಳಸಿ ಹೊಗೆಯನ್ನು ಹೊರಬಿಡಲಾಯಿತು.

ಬೆಂಕಿಯಿಮದ ಸುಮಾರು 75 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News