ಮಂಗಳೂರು | ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿ ಉದ್ಘಾಟನೆ
Update: 2025-12-05 17:47 IST
ಮಂಗಳೂರು, ಡಿ.5: ನಗರದ ಹಂಪನಕಟ್ಟೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 5.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, 2025-26ನೇ ಸಾಲಿನಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಬಳಸಿಕೊಂಡು ಕಂಪ್ಯೂಟರ್, ಸುಸಜ್ಜಿತ ಪ್ರಯೋಗಾಲಯ ನಿರ್ಮಿಸಲಾಗಿದೆ. ಯೂನಿಫೈ ಸಿಎಕ್ಸ್ (ದಿಯಾ ಸಿಸ್ಟಮ್ಸ್) ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಿದೆ ಎಂದರು.
ಈ ಸಂದರ್ಭ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪ ನಿರ್ದೇಶಕಿ ರಾಜೇಶ್ವರಿ ಎಚ್.ಎಚ್., ಕಾಲೇಜಿನ ಪ್ರಾಂಶುಪಾಲ ವಿನ್ಸೆಂಟ್ ಆಂಟನಿ ಮಸ್ಕರಿನಸ್ ಮತ್ತಿತರರು ಉಪಸ್ಥಿತರಿದ್ದರು.