×
Ad

ಮಂಗಳೂರು | ʼಕಿಮ್ಸ್ ಯುಜಿ ಮೆಡಿಕ್ವಿಜ್ -2025ʼ : ಅಂತರ್‌ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸರ್ಧೆ

Update: 2025-12-22 18:40 IST

ಮಂಗಳೂರು ಡಿ. 22: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಪದವಿಪೂರ್ವ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 5ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ‘‘ಕಿಮ್ಸ್ ಯು.ಜಿ. ಮೆಡಿಕ್ವಿಜ್ - 2025’’ ಸ್ಪರ್ಧೆ ಡಿ.27ರಂದು ಬೆಳಗ್ಗೆ 10:00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಸ್ಪರ್ಧೆಯು ಕೇವಲ ಆಂತರಿಕ ವೈದ್ಯಕೀಯ ಶಾಸ್ತ್ರ ವಿಷಯದ ಬಗ್ಗೆ ಸೀಮಿತಗೊಂಡಿದೆ. ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್, ಪ್ರಾಂಶುಪಾಲ ಪ್ರೊ.ಡಾ.ಶಹನವಾಜ್ ಮಣಿಪಾಡಿ, ವೈದ್ಯಕೀಯ ಅಧೀಕ್ಷಕ ಡಾ.ಅಂಜನ್ ಕುಮಾರ್, ಮುಖ್ಯ ಆಡಳಿತ ಅಧಿಕಾರಿ ಡಾ.ರೋಹನ್ ಮೋನಿಸ್ ಮತ್ತು ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷ ಡಾ.ಮುಹಮ್ಮದ್ ಇಸ್ಮಾಯಿಲ್ ಮತ್ತು ಸದಸ್ಯರಾದ ಡಾ.ಎಂ..ವಿ. ಪ್ರಭು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.

ಹೆಚ್ಚಿನ ಮಾಹಿತಿಗಾಗಿ ಸ್ಪರ್ಧಾಕೂಟದ ಸಂಘಟಕರು ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದೇವದಾಸ್ ರೈ 9845081145 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News