×
Ad

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ

Update: 2025-05-23 21:45 IST

ಮಂಗಳೂರು: ನಗರ ಹೊರವಲಯದ ವಾಮಂಜೂರಿನಲ್ಲಿರುವ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ. ಹಾಗು ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್.ನೇತೃತ್ವದ ತಂಡವು ಶುಕ್ರವಾರ ದಾಳಿ ಮಾಡಿ ದಾಖಲೆಪತ್ರಗಳನ್ನು ಪರಿಶೀಲಿಸಿದೆ.

ಈ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಕೂಡ ಪ್ರಾಧಿಕಾರವು ಮೃಗಾಲಯದ ಅಭಿವೃದ್ಧಿಗೆ ಹಣವನ್ನು ವೆಚ್ಚ ಮಾಡುತ್ತಿಲ್ಲ. ್ಲ. ಅಲ್ಲಿನ ಸಿಬ್ಬಂದಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಕೂಡ ಒದಗಿಸಿಲ್ಲ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಕೂಡ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿದೆ. ಲೀಸ್‌ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸಿಲ್ಲ. ಟೆಂಡರ್ ಪ್ರಕ್ರಿಯೆಯಲ್ಲಿ ಕೂಡ ಸಾಕಷ್ಟು ಲೋಪ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಭಾರ ಅಧೀಕ್ಷಕ ಕುಮಾರಚಂದ್ರ ತಿಳಿಸಿದ್ದಾರೆ.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News