ಮಂಗಳೂರು | ಡಿ.14ರಂದು ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ವಿಚಾರ ಕೂಟ
Update: 2025-12-12 19:20 IST
ಮಂಗಳೂರು,ಡಿ.12: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಗಂಜಿಮಠ ಗ್ರಾಪಂ ವ್ಯಾಪ್ತಿಯ ಮಳಲಿ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ’ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾಣಿ ಅಬ್ಬಕ್ಕ ಚಾವಡಿಯ ಸಹಭಾಗಿತ್ವದಲ್ಲಿ ಡಿ.14ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಕರ್ನಾಟಕ ಜಾನಪದ ವಿವಿಯ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಕಾಡಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.