×
Ad

ಮಂಗಳೂರು| ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

Update: 2026-01-14 19:34 IST

ಮೋಹನ್

ಮಂಗಳೂರು, ಜ.14: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಹಲ್ಲೆಗೈದು ಜನಾಂಗೀಯ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.

ಬಂಧಿತನನ್ನು ಕೂಳೂರಿನ ಮೋಹನ್ (37) ಎಂದು ಗುರುತಿಸಲಾಗಿದೆ. ಈಗಾಗಲೆ ಕೂಳೂರಿನ ರತೀಶ್ ದಾಸ್ (32), ಧನುಷ್ (24), ಸಾಗರ್ (24) ಎಂಬವರನ್ನು ಬಂಧಿಸಲಾಗಿದೆ. ಮೋಹನ್‌ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ.

ಕಳೆದ 15 ವರ್ಷಗಳಿಂದ ನಗರ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್‌ಜಾನ್ ಅನ್ಸಾರಿ ಜ.11ರಂದು ಸಂಜೆ ಕೆಲಸ ಮುಗಿಸಿ ಕೂಳೂರಿನಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಬಾಂಗ್ಲಾದೇಶಿ ಪ್ರಜೆ ಎಂದು ನಿಂದಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಂಗಳವಾರ ಮೂವರು ಮತ್ತು ಬುಧವಾರ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News