×
Ad

ಮಂಗಳೂರು | ಡಿ.19 ರಂದು ಎಂಎಸ್ಎಂಇ ಮಾಹಿತಿ ಕಾರ್ಯಾಗಾರ

Update: 2025-12-15 18:12 IST

ಮಂಗಳೂರು,ಡಿ.15: ಕೈಗಾರಿಕಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ಇಲಾಖಾಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘಸಂಸ್ಥೆಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎಂಎಸ್ಎಂಇ ಮಾಹಿತಿ ಕಾರ್ಯಾಗಾರ ಡಿ.19 ರಂದು ಬೆಳಗ್ಗೆ 10 ಗಂಟೆಗೆ ನಗರದ ಯೆಯ್ಯಾಡಿಯ ಕೈಗಾರಿಕಾ ಪ್ರಾಂಗಣದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಎಂಎಸ್ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವುದು (ಆರ್ಎಎಂಪಿ) ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News