×
Ad

ಮಂಗಳೂರು| ಕೋಟ್ಯಂತರ ರೂ. ವಂಚನೆ ಪ್ರಕರಣ: ದಂಪತಿಯ ಬಂಧನ

Update: 2025-10-17 22:54 IST

ಮಂಗಳೂರು, ಅ.17: ಮುಲ್ಕಿ ತಾಲೂಕಿನ ಕಿನ್ನಿಗೋಳಿ ಪರಿಸರದ ಸಾರ್ವಜನಿಕರ ಬಳಿ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಸುಮಾರು 1.5 ಕೋಟಿ ರೂ. ಹಾಗೂ ಚಿನ್ನವನ್ನು ಪಡೆದು ಹಲವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಅರೋಪಿಗಳಾದ ಕವತ್ತಾರು ಗ್ರಾಮದ ರಿಚರ್ಡ್ ಡಿಸೋಜ (52) ಮತ್ತಾತನ ಪತ್ನಿ ರಶ್ಮಿ ರೀಟಾ ಪಿಂಟೋ (47) ರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ವರ್ಷ ಈ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಗಳು ಪೊಲೀಸರಿಗೆ ಸಿಗದೆ ಮುಂಬೈನಲ್ಲಿ ತಲೆಮರೆಸಿ ಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಂಪತಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಮುಲ್ಕಿ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News