ಮಂಗಳೂರು: ಗಾರ್ಡಿಯನ್ ಏಂಜಲ್ ಚರ್ಚ್‌ನಲ್ಲಿ ಪೊಲೀಸ್ ಜನಸಂಪರ್ಕ ಸಭೆ
ಮಂಗಳೂರು, ಫೆ.1: ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಆಂಜೆಲೊರ್ ಘಟಕ, ಗಾರ್ಡಿಯನ್ ಏಂಜಲ್ ಚರ್ಚ್ ನಾಗೋರಿ, ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ನೀತಿ ಹಾಗೂ ಶಾಂತಿ ಆಯೋಗದ ಸಹಯೋಗದೊಂದಿಗೆ ರವಿವಾರ ಗಾರ್ಡಿಯನ್ ಏಂಜಲ್ ಚರ್ಚ್ ಸಭಾಭವನದಲ್ಲಿ ಪೊಲೀಸ್ ಜನಸಂಪರ್ಕ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ದಕ್ಷಿಣ ವಲಯದ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕ್ರಾಂತಿ ಅವರು ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ವಿವರಿಸಿದರು.
ಮಂಗಳೂರು ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಶಿವಕುಮಾರ್, ವೆನ್ಲಾಕ್ ಜಿಲ್ಲಾಸ್ಪತ್ರೆಯ ಆಯುಷ್ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್ ಎ. ಜೆ., ಮೆಸ್ಕಾಂ ಮರೋಳಿ ವಿಭಾಗದ ಸಹಾಯಕ ಕಾರ್ಯನಿವಾಹಕ ಇಂಜಿನಿಯರ್ ಶಿವಪ್ರಕಾಶ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಶನ್ ಪತ್ರಾವೊ ಮತ್ತು ಕಥೊಲಿಕ್ ಸಭಾದ ಅಧ್ಯಕ್ಷ ಆಲ್ಬರ್ಟ್ ಲಸ್ರಾದೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂತ ಅಲೋಶಿಯಸ್ ಕಾಲೇಜಿನ ಡೀನ್ ಡಾ. ರೋಜ್ ವೀರಾ ಡಿ ಸೋಜ, ಸಾಮಾಜಿಕ ಕಾರ್ಯಕರ್ತ ಜಿ. ಕೆ. ಭಟ್ ಉಪಸ್ಥಿತರಿದ್ದರು. ಸಭೆಯಲ್ಲಿ ಸುಮಾರು 250 ಮಂದಿ ಭಾಗವಹಿಸಿದ್ದರು.
ಕಥೊಲಿಕ್ ಸಭೆಯ ಅಧ್ಯಕ್ಷ ಆಲ್ಬರ್ಟ್ ಲಸ್ರಾದೊ ಸ್ವಾಗತಿಸಿದರು. ಆಂಜೆಲೊರ್ ಧರ್ಮಕ್ಷೇತ್ರದ ಪ್ರಧಾನ ಧರ್ಮಗುರು ಫೆಡ್ರಿಕ್ ಮೊಂತೇರೊ ಪ್ರಾಸ್ತಾವಿಕವಾಗಿ ಮಾತನಾಡಿದರು. ನೀತಿ ಹಾಗೂ ಶಾಂತಿ ಆಯೋಗದ ಕಾರ್ಯದರ್ಶಿ ಮನೋಹರ್ ಸಲ್ಡಾನಾ ವಂದಿಸಿದರು. ಲೊಲಿನಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.