×
Ad

ಮಂಗಳೂರು | ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2026-01-26 20:31 IST

ಮಂಗಳೂರು: ನಗರದ ನ್ಯಾಷನಲ್ ಟ್ಯುಟೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಯು.ಎಚ್. ಖಾಲಿದ್ ಉಜಿರೆ ಅವರು ವಹಿಸಿ ಮಾತನಾಡಿದ ಅವರು, ಭಾರತದ ಸಂವಿಧಾನವು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು, ಅದನ್ನು ಅನುಸರಿಸಿ ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ನಮ್ಮ ಪ್ರಜಾಪ್ರಭುತ್ವದ ಆದರ್ಶಗಳು ಹಾಗೂ ದೇಶದ ಒಕ್ಕೂಟ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ವಿದ್ಯಾ, ಕಚೇರಿ ವ್ಯವಸ್ಥಾಪಕಿ ಅನಿತಾ, ಶಿಕ್ಷಕಿಯರಾದ ಶೋಭಾ, ರಿಂಷಾ, ಶುಭಾ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕರಾದ ಸಲ್ಮಾನ್ ಫಾರಿಷ್, ಸೌಬಾನ್, ಅನಾಸ್ ಹಾಗೂ ಡಿ.ಅಬ್ದುಲ್ಲಾ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News