×
Ad

ಮಂಗಳೂರು| ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 4 ತಿಂಗಳ ಸಜೆ, ದಂಡ

Update: 2025-09-16 23:34 IST

ಮಂಗಳೂರು, ಸೆ.16: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಆರೋಪಿಯು ದಂಡ ತೆರಳು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ನ್ಯಾಯಾಧೀಶರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

2022ರ ಎ.25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿ ಸಿ ಬಸ್‌ನಲ್ಲಿ ಆರೋಪಿ ಮಾಡ್ನೂರು ಗ್ರಾಮದ ನಿವಾಸಿ ಸತ್ತಾರ್ ಎಂಬಾತನು ತನ್ನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆ ವಿ ರವರು ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ವೇಳೆ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾದ ಕವಿತಾ ಕೆ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News