ಮಂಗಳೂರು | ಷೇರು ಮಾರುಕಟ್ಟೆಯ ಬಗ್ಗೆ ವಿಶೇಷ ಉಪನ್ಯಾಸ
Update: 2025-12-22 18:45 IST
ಮಂಗಳೂರು, ಡಿ. 22: ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ಷೇರು ಮಾರುಕಟ್ಟೆ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವ ಕೆ.ರಾಜು ಮೊಗವೀರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿಗಳನ್ನು ನೀಡಿದರು.
ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಪ್ರೀತಿ ಕೀರ್ತಿ ಡಿ ಸೋಜ ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕ ಡಾ. ದಿನಕರ ಕೆಂಜೂರು, ಡಾ. ರಮ್ಯ ಕೆ. ಆರ್, ವೈಶಾಲಿ ಕೆ ಮತ್ತು ಸಿ. ಲಹರಿ ಉಪಸ್ಥಿತರಿದ್ದರು.
ಸುಷ್ಮಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚೈತನ್ಯ ವಂದಿಸಿದರು.