×
Ad

ಮಂಗಳೂರು: ಜು.27ರಿಂದ ಆ.2ರ ವರೆಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ

Update: 2025-07-16 13:45 IST

ಸಾಂದರ್ಭಿಕ ಚಿತ್ರ (Meta AI)

ಮಂಗಳೂರು, ಜು.16: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಂಸ್ಥೆಯ ಆಶ್ರಯದಲ್ಲಿ ಜು.27ರಿಂದ ಆಗಸ್ಟ್ 2ರ ವರೆಗೆ ರಾಜ್ಯ ಮಟ್ಟದ ಯೋಯೆಕ್ಸ್ ಸನ್ ರೈಸ್ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಕ್ರೀಡಾಕೂಟ ಉರ್ವದ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.27ರಂದು ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. ಈ ಕ್ರೀಡಾಕೂಟದಲ್ಲಿ 19 ವರ್ಷದ ವಯೋಮಿತಿಯ ಹಾಗೂ ಸೀನಿಯರ್ಸ್ ವಿಭಾಗದ ಪುರುಷರ ಮತ್ತು ಮಹಿಳೆಯರ, ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸಡ್ ಡಬ್ಬಲ್ಸ್ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಅದೇ ರೀತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಬ್ ಜೂನಿಯರ್ ಮತ್ತು ಜೂನಿಯರ್ ಕ್ರೀಡಾಕೂಟ ಆ. 9 ಮತ್ತು 10 ರಂದು ಆಯೋಜಿಸಲಾಗಿದೆ. ಇದರಲ್ಲಿ ಅಂಡರ್ 9, 11, 13, 15, 17 ಮತ್ತು 19 ವರ್ಷದ ಬಾಲಕರ ಮತ್ತು ಬಾಲಕಿಯರ ಸಿಂಗಲ್ಸ್ ಹಾಗೂ ಡಬ್ಬಲ್ಸ್ ವಿಭಾಗದಲ್ಲಿ ಕ್ರೀಡಾಪಟುಗಳು ಸ್ಪರ್ಧೆಗೆ ಇಳಿಯಲಿದ್ದಾರೆ . ರಾಜ್ಯದ ಸರಿಸುಮಾರು ಒಂದು ಸಾವಿರಕ್ಕೂ ಅಧಿಕ ಆಟಗಾರರು ಭಾಗವಹಿಸಲಿದ್ದಾರೆ. 9 ದಿನಗಳ ಈ ಕ್ರೀಡಾಕೂಟದಲ್ಲಿ 10 ಸಾವಿರ ಮಂದಿ ಪ್ರೇಕ್ಷಕರಾಗಿ ಬರಲಿದ್ದಾರೆ ಎಂದರು.

ಈ ಸಂದರ್ಭ ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್ ಕಾರ್ಯದರ್ಶಿ ಸುಪ್ರೀತ್ ಆಳ್ವ, ಜತೆ ಕಾರ್ಯದರ್ಶಿ ದೀಪಕ್ ಕುಮಾರ್, ಖಜಾಂಚಿ ಲಕ್ಷ್ಮೀ ಪಿ. ಸುವರ್ಣ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎ.ಕೆ.ನಿಯಾಝ್, ರಹೀಝ್ ಪಿ.ಸಿ. ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News