×
Ad

ಮಂಗಳೂರು: ಆನ್‌ಲೈನ್ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣ ಕಳೆದುಕೊಂಡ ವಿದ್ಯಾರ್ಥಿ

Update: 2025-12-08 22:57 IST

ಸಾಂದರ್ಭಿಕ ಚಿತ್ರ 

ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು ಹಂತ ಹಂತವಾಗಿ 31,99,800 ರೂ. ವರ್ಗಾಯಿಸಿದ್ದೆ. ಬಳಿಕ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡುವಂತೆ ಕೇಳಿಕೊಂಡಾಗ ಮತ್ತಷ್ಟು ಹಣ ಹೂಡಿಕೆ ಮಾಡುವಂತೆ ಹೇಳಿದ್ದಲ್ಲದೆ ತೆರಿಗೆ ಮತ್ತಿತರ ಶುಲ್ಕಗಳನ್ನು ಪಾವತಿಸಬೇಕು. ಇಲ್ಲದಿದ್ದಲ್ಲಿ ಯಾವುದೇ ಹಣ ಹಿಂಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಮನೆಯವರು ಹಾಗೂ ಸ್ನೇಹಿತರಲ್ಲಿ ಈ ವಿಷಯ ಹೇಳಿದಾಗ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು ಎಂದು ಹಣ ಕಳಕೊಂಡ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News