ಮಂಗಳೂರು: ಶಿಕ್ಷಕರ ಸೇವಾ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧೀನ ಸಂಸ್ಥೆಯಾದ ಶಿಕ್ಷಕರ ಸೇವಾ ಪ್ರತಿಷ್ಠಾನದಿಂದ ಐದರಿಂದ ಪಿಯುಸಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಶಿಕ್ಷಕರ ಸಹಕಾರಿ ಸಂಘದ ಸಭಾಂಗಣದಲ್ಲಿ ವಿತರಿಸಲಾಯಿತು.
ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡಿದ ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಕೆಎಂ ಕೆ ಮಂಜನಾಡಿ, ಸಾಂಕೇತಿಕವಾಗಿ ಇವತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಗಿದ್ದು, ಅರ್ಜಿ ಸಲ್ಲಿಸಿದ ಎಲ್ಲರಿಗೂ ಮುಂದಿನ ದಿನಗಳಲ್ಲಿ ಅವರವರ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡಲಾಗುವುದು. ವಿದ್ಯಾರ್ಥಿಗಳು ಪಡೆದುಕೊಂಡ ಈ ವಿದ್ಯಾರ್ಥಿ ವೇತನವನ್ನು ತಮ್ಮ ಶೈಕ್ಷಣಿಕ ಕಾರ್ಯಗಳಿಗೆ ಮಾತ್ರ ಬಳಸಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು. ಸಮುದಾಯದ ಪ್ರತಿ ಒಬ್ಬ ರಿಗೆ ಪರಸ್ಪರ ಸಹಕಾರ ನೀಡಬೇಕು ಎಂದರು.
ಪ್ರತಿಷ್ಠಾನದ ಉಪಾಧ್ಯಕ್ಷರಾದ ರವಿಕಲಾ ಶೆಟ್ಟಿ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದು, ಶಿಕ್ಷಕರ ಸಹಕಾರಿ ಪತ್ತಿನ ಸಂಘದ ನಿರ್ದೇಶಕರುಗಳಾದ ಹಿಲ್ದಾ ಕ್ಲೈಮಾನ್ಸಿಯ ಪಿಂಟೋ, ನಿವೃತ್ತ ಪ್ರಾಂಶುಪಾಲರಾದ ಡಾ. ಎನ್ ಇಸ್ಮಾಯಿಲ್, ಚಂದ್ರಶೇಖರ್, ರಘುನಾಥ್ ಭಟ್, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರ್ಮಿಳ, ಮಹಾದೇವಿ, ಪ್ರತಿಷ್ಠಾನದ ನಿರ್ದೇಶಕರುಗಳು ಭಾಗವಹಿಸಿದ್ದರು. ಕಾರ್ಯದರ್ಶಿ ಉದಯ ನಾಯಕ ರವರು ಕಾರ್ಯಕ್ರಮ ನಿರೂಪಿಸಿದರು.