×
Ad

ಮಂಗಳೂರು| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ: ಇಬ್ಬರ ಬಂಧನ

Update: 2026-03-07 20:28 IST

ಮಂಗಳೂರು, ಮಾ.7: ನಗರದ ಉರ್ವ ಮಾರಿಗುಡಿ ಬಳಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ಒಟ್ಟು 12.46 ಗ್ರಾಂ ತೂಕದ 1,24,600 ರೂ. ಅಂದಾಜು ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಗೋಳ್ತಮಜಲಿನ ಅಶೋಕನಗರ ವೇಲ್ಸ್‌ಪೇಟೆಯ ತಿಲಕ್‌ರಾಜ್ (31) ಮತ್ತು ಬಜಪೆ ಭಟ್ರಕೆರೆ ಮೂಲದ ಕುದ್ರೋಳಿ ನಡುಪಳ್ಳಿ ಬಳಿಯ ಶೇಕ್ ಹಾರಿಸ್ ಯಾನೆ ಜಿಗರ್ (32) ಬಂಧಿತ ಆರೋಪಿಗಳಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಿ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಂಜೇಶ್ವರ ಮೂಲದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಎಂಡಿಎಂಎ ಪಡೆದು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿಸಿ ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡಲು ಬಂದಿರು ವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬಳಸುತ್ತಿದ್ದ ಸ್ಕೂಟರ್‌ನಲ್ಲಿದ್ದ ಮೂರು ಕವರ್‌ಗಳಲ್ಲಿ ಎಂಡಿಎಂಎ ಪತ್ತೆಯಾಗಿದೆ. ಆರೋಪಿಗಳಿಂದ 5 ಸಾವಿರ ರೂ. ಮೌಲ್ಯದ ಮೊಬೈಲ್, ಎರಡು ಸ್ಕೂಟರ್ ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News