ಮಂಗಳೂರು: ಆಲದ ಮರದ ಕೊಂಬೆ ಬಿದ್ದು 2 ಕಾರುಗಳು ಜಖಂ
Update: 2024-05-22 12:21 IST
ಮಂಗಳೂರು, ಮೇ 22: ಕಳೆದ ರಾತ್ರಿ ಸುರಿದ ಮಳೆಗೆ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ಮಂಗಳೂರಿನ ಕೋರ್ಟ್ ರಸ್ತೆ ಬಳಿ ನಡೆದಿದೆ.
ರಸ್ತೆಗೆ ಅಡ್ಡಲಾಗಿ ಕಾರುಗಳ ಮೇಲೆ ಮರ ಬಿದ್ದ ಪರಿಣಾಮ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮರದ ಕೊಂಬೆ ವಿದ್ಯುತ್ ತಂತಿಗಳ ಮೇಲೂ ಬಿದ್ದಿದ್ದರಿಂದ ಸ್ಥಳದಲ್ಲಿ ವಿದ್ಯುತ್ ಪೊರೈಕೆ ಸ್ಥಗಿತಗೊಂಡಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಸರಿಪಡಿಸಿದರು. ಮರವನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ.