ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಎನ್ಎಸ್ಎಸ್ ಘಟಕದ ವತಿಯಿಂದ ಉಳ್ಳಾಲ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು , ಡಿ.7: ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ದಿ ಮಂಡಳಿ, ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ ಎಸ್) ಘಟಕದ ವತಿಯಿಂದ ಉಳ್ಳಾಲ ಬೀಚ್ ಸ್ವಚ್ಛತಾ ಕಾರ್ಯಕ್ರಮವು ಶನಿವಾರ ನಡೆಯಿತು.
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಂ.ಎ.ಗಫೂರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ವಂ.ಫಾ.ಫೌಸ್ಟಿನ್ ಲೂಕಾಸ್ ಲೋಬೊ, ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಪ್ರದೀಪ್ ಡಿ ಸೋಜ ಹಾಗೂ ಉಳ್ಳಾಲ ನಗರಸಭೆಯ ಪೌರಾಯುಕ್ತ ತೇಜಮೂರ್ತಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿ ವಂ.ಫಾ.ಡೊನಾಲ್ಡ್ ನಿಲೇಶ್ ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ಔಷಧೀಯ ವಿಭಾಗದ ಆಡಳಿತಾಧಿಕಾರಿ ವಂ.ಫಾ.ನೆಲ್ಸನ್ ಧೀರಜ್ ಪಾಯಸ್, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ವಂ.ಫಾ.ಅಶ್ವಿನ್ ಲಾರೆನ್ಸ್ ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ಡಾ.ಇ.ಎಸ್.ಜೆ.ಪ್ರಭುಕಿರಣ್, ಉಪಪ್ರಾಂಶುಪಾಲ ಡಾ.ವಿಲ್ಮಾ ಮೀರಾ ಡಿ’ಸೋಜ, ಫಾರ್ಮಸ್ಯೂಟಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಎಸ್, ವೈದ್ಯಕೀಯ ಉಪ ಅಧೀಕ್ಷಕ ಡಾ.ದೀಪಾ ಪಾಯಸ್, ಯು.ಜಿ.ಉಸ್ತುವಾರಿ ಡಾ.ಅಮಿತಾ, ಪಿ.ಜಿ.ಉಸ್ತುವಾರಿ ಡಾ.ರಾಜಚಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಶೆಟ್ಟಿ, ಕ್ಯಾ.ವಿಜಯ್ ಕುಮಾರ್, ಉಳ್ಳಾಲ ನಗರಸಭೆಯ ಪರಿಸರ ವಿಭಾಗದ ಇಂಜೀನಿಯರ್ ಪುನೀತ್ ಎಂ.ಎಸ್., ಹಿರಿಯ ಆರೋಗ್ಯಾಧಿಕಾರಿಗಳಾದ ರವಿ ಕೃಷ್ಣ ಹಾಗೂ ಲಿಲ್ಲಿ ನಾಯರ್ ಉಪಸ್ಥಿತರಿದ್ದರು.
ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಧೀರಜ್ ಫೆರ್ನಾಂಡೀಸ್ ಅವರು ಸ್ವಾಗತಿಸಿ, ಎನ್ಎಸ್ಎಸ್ ಘಟಕದ ನಾಯಕ ಪ್ರಣವ್ ವಂದಿಸಿದರು. ಸ್ವಯಂ ಸೇವಕರಾದ ಶ್ರೀ ರಾಮ್ ಮತ್ತು ವೈದ್ಯಕೀಯ ಸಾಮಾಜಿಕ ಕಾರ್ಯಕರ್ತರಾದ ಶೌವಾದ್ ಕಾರ್ಯಕ್ರಮ ನಿರೂಪಿಸಿದರು.
ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜು ಹಾಗೂ ಫಾರ್ಮಾಸ್ಯೂಟಿಕಲ್ ಸೈನ್ಸಸ್ ಕಾಲೇಜಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳ್ಳಾಲ ಬೀಚ್ ಕ್ಲೀನಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಸ್ವಚ್ಚ ಪರಿಸರದ ಮಹತ್ವವನ್ನು ಸಾರಿದರು.