×
Ad

ಮಂಗಳೂರು ವಿ.ವಿ. ಸರಣಿ ಉಪನ್ಯಾಸ ಮಾಲಿಕೆ

Update: 2025-12-15 22:02 IST

ಮಂಗಳೂರು,ಡಿ.15: ಮಂಗಳೂರು ವಿಶ್ವವಿದ್ಯಾನಿಲಯ, ಎಸ್ವಿಪಿ. ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಪಂಪ ಪ್ರಶಸ್ತಿ ಪುರಸ್ಕೃತ ಪ್ರೊ. ಬಿ.ಎ. ವಿವೇಕ ರೈಅವರಿಂದ ಪಂಪನ ಆದಿಪುರಾಣ ಕಾವ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಡಿಸೆಂಬರ್ 22, 23 ಮತ್ತು 24 ರಂದು ಸಂಜೆ 5:30 ರಿಂದ 6:30 ರವರೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಸಂಜೆ 5 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾನಿಲಯ ಕುಲಸಚಿವ (ಪ್ರಭಾರ) ಪ್ರೊ. ಗಣೇಶ್ ಸಂಜೀವ್ ಹಾಗೂ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಭಾಗವಹಿಸಲಿರುವರು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News