ಮಂಗಳೂರು | ಡಿ.5ರಂದು ವಿಶ್ವ ಏಡ್ಸ್ ದಿನಾಚರಣೆ
Update: 2025-12-04 18:27 IST
ಮಂಗಳೂರು,ಡಿ.4: ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ.ಜಿಲ್ಲಾಡಳಿತ ಮತ್ತು ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಯೆನೆಪೋಯ ನಸಿರ್ಂಗ್ ಕಾಲೇಜು, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ದ.ಕ.ಜಿಲ್ಲಾ ವಕೀಲರ ಸಂಘ ದ.ಕ. ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ದ.ಕ.ಇವುಗಳ ಸಂಯುಕ್ತ ಆಶ್ರಯದಲ್ಲಿಶ್ವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವು ಡಿ.5ರಂದು ಬೆಳಗ್ಗೆ 10ಕ್ಕೆ ನಗರದ ಹಳೆ ಡಿಸಿ ಕಚೇರಿ ಆವರಣದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.