×
Ad

ಮಂಗಳೂರು: ವಿಡಿಯೋ ವೈರಲ್ ಮಾಡಿದ ಆರೋಪ; ಯುವತಿ ಸೆರೆ

Update: 2025-10-19 21:35 IST

ಮಂಗಳೂರು,ಅ.19: ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವೇಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ಪ್ರಸಕ್ತ ನಗರದ ಕಂಕನಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆಯನ್ನು ಕದ್ರಿ ಪೋಲೀಸರು ರವಿವಾರ ಬಂಧಿಸಿದ್ದಾರೆ.

ಆರೋಪಿ ನಿರೀಕ್ಷಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರೀಕ್ಷಾಳ ಸ್ನೇಹಿತೆಯರಾದ ಇಬ್ಬರು ಯುವತಿಯರು ಕದ್ರಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಕಾರ್ಕಳದ ನಿಟ್ಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಷೇಕ್ ಆಚಾರ್ಯ ತನ್ನ ಡೆತ್‌ನೋಟ್‌ನಲ್ಲಿ ನಿರೀಕ್ಷಾ ತನ್ನ ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವಿಡಿಯೋ ಮಾಡಿ ಬೇರೆಯವರಿಗೆ ಕಳುಹಿಸಿರುವುದಾಗಿ ಬರೆದಿದ್ದುದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆರೋಪಿ ನಿರೀಕ್ಷಾಳು ಅಭಿಷೇಕ್‌ಗೂ ವಿಡಿಯೋ ಕಳುಹಿಸಿದ್ದಳು. ಆ ವಿಡಿಯೋ ಅಭಿಷೇಕ್ ಅಡ್ಮಿನ್ ಆಗಿದ್ದ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಫಾರ್ವರ್ಡ್ ಆಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News