×
Ad

ಕಾಶ್ಮೀರ ಪಹಲ್ಗಾಮ್ ದುಷ್ಕೃತ್ಯ: ಮಂಗಳೂರು ಬಿಷಪ್ ಖಂಡನೆ

Update: 2025-04-24 14:33 IST

ಮಂಗಳೂರು, ಎ.24:ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿರುವ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸೆಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಬಿಷಪ್ ಅತಿ ವಂ. ಡಾ.ಪೀಟರ್ ಪಾವ್ಲ್ ಸಲ್ಡಾನ ಖೇದ ವ್ಯಕ್ತಪಡಿಸಿದ್ದಾರೆ.

ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್ ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ. ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದವರು ಆಶಿಸಿದ್ದಾರೆ.

ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News