×
Ad

ಸೆ. 8ರಂದು ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಮ್ಯಾರಥಾನ್ ಸ್ಪರ್ಧೆ

Update: 2024-09-06 22:34 IST

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಗೆ ಸೆ. 8ರಂದು ಬೆಳಗ್ಗೆ 6 ಗಂಟೆಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ನ್ಯೂಚಿತ್ರ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ ಮುಂಭಾಗದಿಂದ ಮಂಗಳ ಕ್ರೀಡಾಂಗಣದಲ್ಲಿ ಅಂತ್ಯಗೊಳಿಸಲಾಗುತ್ತದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News