×
Ad

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆ

Update: 2023-10-08 21:28 IST

ಸುರತ್ಕಲ್, ಅ.8: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ರವಿವಾರ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ಮುಂಬರುವ ಲೋಕ ಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚೆಗಳು ನಡೆದವು. ಇದೇ ಸಂದರ್ಭ ಸುರತ್ಕಲ್‌ ಬ್ಲಾಕ್‌ ವ್ಯಾಪ್ತಿಯ ಹಲವು ಜೆಡಿಎಸ್‌ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಗೊಂಡರು. ಜೆಡಿಎಸ್ ಸುರತ್ಕಲ್ ಬ್ಲಾಕ್ ಅಧ್ಯಕ್ಷ ನವಾಝ್ ಕಾಟಿಪಳ್ಳ, ಸೇವಾಂಜಲಿ ಟ್ರಸ್ಟ್‌ ಅಧ್ಯಕ್ಷೆ ರೇಷ್ಮಾ ಡಿಸೋಜ, ಸಾಮಾಜಿಕ ಕಾರ್ಯಕರ್ತೆ ಶಾಂತಿ ಡಿಸೋಜ, ಜೆಡಿಎಸ್ ಬ್ಲಾಕ್ ಪದಾಧಿಕಾರಿಗಳಾದ ಕಾಟಿಪಳ್ಳ ವಾರ್ಡ್‌ನ ಉಬೇದ್ ಹುಸೇನ್, ಎಂ.ಡಿ. ಖಾದರ್, ಅಬ್ದುಲ್ ರಹ್ಮಾನ್, ಜಂಶೀದ್, ಅಫ್ನಾನ್, ಹಸನಬ್ಬ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಇನಾಯತ್ ಅಲಿ ಅವರು ಕಾಂಗ್ರೆಸ್‌ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.

ಸುರತ್ಕಲ್‌ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ವಹಿಸಿದ್ದರು. 

ಸಭೆಯಲ್ಲಿ ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಮಹಾಬಲ ಮಾರ್ಲ, ಹರಿನಾಥ್, ಕವಿತಾ ಸನಿಲ್, ಗುಲ್ಝಾರ್ ಬಾನು, ಕಾರ್ಪೊರೇಟರ್ ಅನಿಲ್ ಕುಮಾರ್, ಮುಖಂಡರಾದ ಉಮೇಶ್ ದಂಡಕೇರಿ, ಶಶಿಕಲಾ ಪದ್ಮನಾಭ, ಶಮೀರ್ ಕಾಟಿಪಳ್ಳ, ಮಲ್ಲಿಕಾರ್ಜುನ, ರಾಜೇಶ್ ಕುಳಾಯಿ, ರೆಹಮಾನ್ ಕುಂಜತ್ತಬೈಲ್ ಸೇರಿದಂತೆ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News