×
Ad

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್‌ರ ಕಚೇರಿ ಉದ್ಘಾಟನೆ

Update: 2025-11-07 19:24 IST

ಮಂಗಳೂರು: ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್‌ರ ಕಚೇರಿಯು ನಗರದ ಬಿಜೈಯ ಮೆಸ್ಕಾಂ ಕಾರ್ಪೊರೇಟ್ ಕಚೇರಿ ಮೆಸ್ಕಾಂ ಭವನದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.

ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯ ಕುಮಾರ್ ಆರ್. ಕಚೇರಿ ಉದ್ಘಾಟಿಸಿ ಶುಭಕೋರಿದರು. ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕೋಶಾಧಿಕಾರಿ ಪದ್ಮರಾಜ್ ಆರ್., ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಶಾಸಕ ಜೆ.ಅರ್. ಲೋಬೋ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ರಾಜ್ಯ ಪರಿಸರ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆ ಶಾಲೆಟ್ ಪಿಂಟೊ, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಆರ್ಥಿಕ ಸಲಹೆಗಾರ ದೇವರಾಜ್, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್, ನಮಿತಾ ಹರೀಶ್ ಕುಮಾರ್, ಅಪೇಕ್ಷಾ ಸುಶೀತ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಮೆಸ್ಕಾಂ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News