ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲು ಆಗ್ರಹಿಸಿ ಕೇಂದ್ರಕ್ಕೆ ಪತ್ರ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಜ. 31: ಸಾಮಾಜಿಕ ಜಾಲಾತಾಣಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಚಾರ ಇದೊಂದು ಜಾಗತಿಕ ಸಮಸ್ಯೆಯಾಗಿದೆ. ಇದಕ್ಕೆ ಕಾನೂನಾತ್ಮಕವಾಗಿ ಸ್ಪಂದಿಸಬೇಕಾಗುತ್ತಿದೆ. ಇವತ್ತಿನ ಪೀಳಿಗೆಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಆಸ್ತ್ರೇಲಿಯದಲ್ಲಿ ಈಗಾಗಲೇ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಾಗಿದೆ. ನಮ್ಮ ದೇಶದಲ್ಲಿ ಇದು ಅಗತ್ಯ. ಈ ವಿಚಾರದ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ
ಮಂಗಳೂರಿನಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾಮಾಜಿಕ ಜಾಲಾತಾಣಗಳು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಚಾರದ ಬಗ್ಗೆ ಮಾತನಾಡಿದ ಅವರು ಯುವ ಸಮುದಾಯ ಮಾನಸಿಕ ಖಿನ್ನತೆ , ಒತ್ತಡ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವ ಪ್ರಕರಣಗಳು ನಮ್ಮಲ್ಲಿ ಜಾಸ್ತಿಯಾಗಿದೆ. ಇದೊಂದು ಯುವ ಪೀಳಿಗೆಗೆ ದೊಡ್ಡ ಸಮಸ್ಯೆಯಾಗಿದೆ
ಆತ್ಮಹತ್ಯೆ ಉದ್ಯಮಿ ಸಿ.ಜೆ. ರಾಯ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡರು ಮತ್ತು ಏನಾಗಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಐಟಿ ಮತ್ತು ಈಡಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ರಾಯ್ ಆತ್ಮಹತ್ಯೆಗೆ ಈಡಿ ಹಾಗೂ ಐಟಿ ಒತ್ತಡ ಕಾರಣ ಎಂದು ನಾನು ಹೇಳುವುದಿಲ್ಲ ಎಂದರು.
ದೇಶದಲ್ಲಿ ಈಡಿ , ಐಟಿ ಮತ್ತಿತರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಕೆಯಾಗುತ್ತಿದೆ. ಆದರೆ ರಾಯ್ ಆತ್ಮಹತ್ಯೆ ಈಡಿ ಮತ್ತು ಐಟಿ ಅಧಿಕಾರಿಗಳು ಒತ್ತಡವಿತ್ತು ಎಂದು ನನಗೆ ಹೇಳಲು ಸಾಧ್ಯವಿಲ್ಲ ಎಂದರು.
ಬಿಲ್ ಬಾಕಿ ಇರುವುದು ನಿಜ: ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಿಲ್ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂ ರಾವ್ ಅವರು ರಾಜ್ಯದಲ್ಲಿ ಎಲ್ಲ ಕಡೆ ಕಾಮಗಾರಿ ನಡೆಯುತ್ತಿದೆ. ಕೆಲವು ಕಾಮಗಾರಿಗಳ ಬಿಲ್ ಬಾಕಿ ಇರುವುದು ನಿಜ. ಕೇಂದ್ರ ಸರಕಾರದಿಂದ ಕೋಟ್ಯಂತರ ಹಣ ಬರಲು ಬಾಕಿ ಇದೆ.ಆದರೆ ವಿನಾ ಕಾರಣ ಗುತ್ತಿಗೆದಾರ ಸಂಘಟನೆಗಳು ಸರಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವುದು ಸಲ್ಲದು. ಸರಕಾರದೊಂದಿಗೆ ಮಾತುಕತೆ ನಡೆಸಿ ಅವರು ತಮ್ಮ ಸಮಸ್ಯೆ ಇತ್ಯರ್ಥಗೊಳಿಸಲಿ ಎಂದು ಹೇಳಿದರು.