×
Ad

ಕೂರತ್ ತಂಙಳ್ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ

Update: 2024-07-08 13:38 IST

ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್

ಮಂಗಳೂರು, ಜು.8: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ನಿಧನಕ್ಕೆ ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ.



'ಎಕ್ಸ್' ನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಸಚಿವರು, 'ಕೂರತ್ ತಂಙಳ್' ಎಂದೇ ಪ್ರಸಿದ್ಧಿ ಪಡೆದಿದ್ದ ಉಳ್ಳಾಲ ಖಾಝಿ, ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರು ನಿಧನರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಯಿತು. ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ಅವರ ನಿಧನವು ಇಡೀ ಕರಾವಳಿ ಭಾಗದ ಜನತೆಗೆ ಅಪಾರ ನಷ್ಟವನ್ನುಂಟು ಮಾಡಿದೆ. ತಂಙಳ್ ಅವರಿಗೆ ನನ್ನ ಹಾಗು ನಮ್ಮ ಸರ್ಕಾರದ ಪರವಾಗಿ ಅಂತಿಮ ನಮನಗಳನ್ನು ಸಲ್ಲಿಸುತ್ತೇನೆ. ಅವರ ಅಪಾರ ಅನುಯಾಯಿಗಳು ಹಾಗೂ ಬಂಧು ಮಿತ್ರರಿಗೆ ನನ್ನ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News