×
Ad

ಮಂಗಳೂರು: ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಸಚಿವರಿಂದ ಸಾಂತ್ವಾನ

Update: 2025-05-31 19:15 IST

ಮಂಗಳೂರು: ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ತೋಟ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿ ಕುಟುಂಬದವರಿಗೆ ಸಮಾಧಾನ ಹೇಳಿದರು.

ನಾಪತ್ತೆಯಾಗಿರುವ ಮೀನುಗಾರರ ಕುಟುಂಬಕ್ಕೆ ‘ಮೀನುಗಾರರ ಸಂಕಷ್ಟ ಪರಿಹಾರ ನಿಧಿ’ಯಿಂದ ತಲಾ 8 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಸಚಿವರು ಈ ಸಂದರ್ಭ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಅಪರ ಜಿಲ್ಲಾಧಕಾರಿ ಡಾ. ಸಂತೋಷ್ ಕುಮಾರ್, ಮೀನುಗಾರಿಕಾ ಉಪ ನಿರ್ದೇಶಕ ದಿಲೀಪ್, ಮೀನುಗಾರ ಸಂಘಟನೆಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News