ಉಳ್ಳಾಲ ದರ್ಗಾ ಆಡಳಿತದಿಂದ ಸಚಿವರಿಗೆ ಸನ್ಮಾನ
ಉಳ್ಳಾಲ, ಸೆ.6: ಉಳ್ಳಾಲ ಜುಮಾ ಮಸೀದಿ ಹಾಗೂ ಸೈಯದ್ ಮದನಿ ದರ್ಗಾ ಸಮಿತಿಯ ಆಶ್ರಯದಲ್ಲಿ ಸಚಿವರಿಗೆ ಸನ್ಮಾನ ಸಮಾರಂಭವು ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ಅವರ ಆಶೀರ್ವಚನ ದೊಂದಿಗೆ ಉಳ್ಳಾಲ ದರ್ಗಾ ವಠಾರದಲ್ಲಿ ಮಂಗಳವಾರ ಜರುಗಿತು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಶಾಫಿ ಸಅದಿ, ಕಣಚೂರ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಲ್ಹಾಜ್ ಯು.ಕೆ.ಮೋನು ಕಣಚೂರು ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಝಮೀರ್ ಅಹ್ಮದ್ ಖಾನ್, ಉಳ್ಳಾಲ ದರ್ಗಾದ ಅಭಿವೃದ್ಧಿಗೆ ಈ ಹಿಂದೆಯೂ ಸಹಕಾರ ನೀಡಿದ್ದು, ಮುಂದೆಯೂ ಸಹಕಾರ ನೀಡಲಿದ್ದೇನೆ ಎಂದರು.
ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದರ್ಗಾ ಸಮಿತಿಯ ಪ್ರ. ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್ ವೇ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಜತೆ ಕಾರ್ಯದರ್ಶಿ ಇಸ್ಹಾಕ್ ಮೇಲಂಗಡಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ದರ್ಗಾ ಸಮಿತಿಯ ಮಾಜಿ ಅಧ್ಯಕ್ಷ ಯು.ಎಸ್.ಹಂಝ ಮತ್ತು ಸದಸ್ಯರು ಉಪಸ್ಥಿತರಿದ್ದರು.