ಮಿತ್ತಬೈಲ್ ಕೇಂದ್ರ ಜುಮಾ ಮಸೀದಿಯಲ್ಲಿ 79 ನೇ ಸ್ವಾತಂತ್ರೋತ್ಸವ
Update: 2025-08-16 12:01 IST
ಬಂಟ್ವಾಳ : ಮಿತ್ತಬೈಲ್ ಮುಹಿಯುದ್ದೀನ್ ಕೇಂದ್ರ ಜುಮಾ ಮಸೀದಿ ಇದರ ವತಿಯಿಂದ 79 ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.
ಮಸೀದಿ ಅಧ್ಯಕ್ಷರಾದ ಹಾಜಿ ಮುಹಮ್ಮದ್ ಅದ್ದೇಡಿ ಅವರ ಅಧ್ಯಕ್ಷತೆಯಲ್ಲಿ, ಸ್ಥಳೀಯ ಖತೀಬರಾದ ಅಬ್ಬಾಸ್ ಫೈಝಿ ಪುತ್ತಿಗೆ ಧ್ವಜಾರೋಹಣ ನೆರವೇರಿಸಿದರು.
ಎಂ.ಜೆ.ಎಂ ಮುದರ್ರಿಸ್ ಉಮರುಲ್ ಫಾರೂಕ್ ಫೈಝಿ ಪೈವಳಿಕೆ ದುವಾ ನಡೆಸಿಕೊಟ್ಟರು. ಕೋಶಾಧಿಕಾರಿ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಇಕ್ಬಾಲ್ ನಂದರ ಬೆಟ್ಟು, ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್, ಸದರ್ ಉಸ್ತಾದ್ ಇಬ್ರಾಹಿಂ ದಾರಿಮಿ, ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆ ಯ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಸ್ವಾಗತಿಸಿ, ಬಶೀರ್ ಮಜಲ್ ಕಾರ್ಯಕ್ರಮ ನಿರೂಪಿಸಿದರು.